ತಿರುಪತಿ-ಶಿರ್ಡಿ ಎಕ್ಸ್‌ಪ್ರೆಸ್‌ಗೆ ಚಾಲನೆ

ಲೋಕಬಂಧು ನ್ಯೂಸ್, ನವದೆಹಲಿ
ಎರಡು ಪ್ರಮುಖ ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ತಿರುಪತಿ- ಶಿರ್ಡಿ ಎಕ್ಸ್‌ಪ್ರೆಸ್‌ಗೆ ಕೇಂದ್ರ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿಸಿದರು.
ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳವಾರ ನವದೆಹಲಿಯ ರೈಲ್ ಭವನದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ತಿರುಪತಿ-ಸಾಯಿನಗರ ಶಿರ್ಡಿ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು.


ತಿರುಪತಿ-ಸಾಯಿನಗರ ಶಿರ್ಡಿ ಎಕ್ಸ್‌ಪ್ರೆಸ್‌ ಆರಂಭ 4 ರಾಜ್ಯಗಳ ಭಕ್ತರಿಗೆ ಐತಿಹಾಸಿಕ ದಿನವಾಗಿದೆ ಎಂದು ವಿ.ಸೋಮಣ್ಣ ಬಣ್ಣಿಸಿದರು. ಇದು ದೇಶದ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದವರು ಬಣ್ಣಿಸಿದರು.