ಲೋಕಬಂಧು ನ್ಯೂಸ್, ಬೆಳಗಾವಿ
ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅನಾವರಣಗೊಳಿಸಿದರು.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಎಚ್.ಕೆ.ಪಾಟೀಲ್, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.