ಲೋಕಬಂಧು ನ್ಯೂಸ್, ಮಂಗಳೂರು
ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ 100 ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಫೆಬ್ರವರಿ 6ರಂದು ಶುಕ್ರವಾರ ಮಾತನಾಡಿದ ಅವರು, ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ್ದೇನೆ.
ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್ 10ಕ್ಕೆ 6 ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸುತ್ತಿದ್ದೇನೆ ಎಂದರು.
