ಫೆ.28ರಿಂದ ಪಿಯುಸಿ, ಮಾ.18ರಿಂದ ಎಸ್ಎಸ್ಎಲ್.ಸಿ ಪರೀಕ್ಷೆ

ಲೋಕಬಂಧು ನ್ಯೂಸ್, ಬೆಂಗಳೂರು
ಪ್ರಸಕ್ತ ಸಾಲಿನ ಎಸ್ಎಸ್ಎಲ್. ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.ಫೆ. 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ಲರಿಂದ ಏಪ್ರಿಲ್‌ 2ರ ವರೆಗೆ ಎಸ್ಎಸ್ಎಲ್. ಸಿ ಪರೀಕ್ಷೆ ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾ.18ರಿಂದ ಎಸ್ಎಸ್ಎಲ್.ಸಿ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರ ವರೆಗೆ ನಡೆಯಲಿದೆ ಎಂದು ತಿಳಿಸಿದರು


ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 6,46,801 ವಿದ್ಯಾರ್ಥಿಗಳು ಹೊಸಬರು ಮತ್ತು 50,540 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 13,022 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.


ಎಸ್‌ಎಲ್‌ಎಲ್‌ಸಿ ಪರೀಕ್ಷೆಗೆ ಒಟ್ಟು 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 8,12,855 ವಿದ್ಯಾರ್ಥಿಗಳು ಹೊಸಬರು ಮತ್ತು 62,845 ಪುನರಾವರ್ತಿತ ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.


ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

ಫೆಬ್ರವರಿ.28: ಕನ್ನಡ, ಅರೇಬಿಕ್
ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 
3: ಇಂಗ್ಲಿಷ್
ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5: ಇತಿಹಾಸ
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12: ಹಿಂದಿ
ಮಾರ್ಚ್ 13: ರಾಜ್ಯಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿ
ಮಾರ್ಚ್ 18: ಪ್ರಥಮ ಭಾಷೆ
ಮಾರ್ಚ್ 23: ವಿಜ್ಞಾನ
ಮಾರ್ಚ್ 25: ದ್ವಿತೀಯ ಭಾಷೆ
ಮಾರ್ಚ್ 28: ಗಣಿತ
ಮಾರ್ಚ್ 30: ತೃತೀಯ ಭಾಷೆ
ಏಪ್ರಿಲ್ 2: ಸಮಾಜ ವಿಜ್ಞಾನ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿ
ಮೇ 18: ಪ್ರಥಮ ಭಾಷೆ
ಮೇ 19: ವಿಜ್ಞಾನ
ಮೇ 20: ದ್ವಿತೀಯ ಭಾಷೆ
ಮೇ 21: ಗಣಿತ
ಮೇ 22: ತೃತೀಯ ಭಾಷೆ
ಮೇ 23: ಸಮಾಜ ವಿಜ್ಞಾನ