ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಪಘಾತ ಸಂಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬ್ಲ್ಯಾಕ್ ಸ್ಪಾಟ್‌ಗಳೆಂದು ಗುರುತಿಸಿರುವ 6 ಕಡೆಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.ಕಲ್ಸಂಕ ಮತ್ತು ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಲ್ಲಿ ಈಗಾಗಲೇ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು ಅವುಗಳು ಕಾರ್ಯನಿರ್ವಹಿಸುತ್ತಿವೆ.
ಅಲ್ಲದೇ, ಅಂಬಾಗಿಲು ಹಾಗೂ ಬಲಾಯಿಪಾದೆಗಳಲ್ಲಿ ಸಿಗ್ನಲ್ ಅಳವಡಿಕೆ ಕಾರ್ಯಪ್ರಗತಿಯಲ್ಲಿದ್ದು, ಶೇ.60ರಷ್ಟು ಮುಗಿದಿದೆ ಎಂದು ಎಸ್ಪಿ ತಿಳಿಸಿದರು.