ಲೋಕಬಂಧು ನ್ಯೂಸ್, ಉಡುಪಿ
ತುಳು ರಂಗಭೂಮಿ ಹಾಗೂ ಚಲನಚಿತ್ರ ನಟ ಭೋಜರಾಜ ವಾಮಂಜೂರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಶೀರೂರು ಮಠದ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು, ಮಠದ ಶ್ರೀರಾಮ ಆಚಾರ್ಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮಧುಕರ ಮುದ್ರಾಡಿ ಇದ್ದರು.