ಅನಂತೇಶ್ವರ ರಥೋತ್ಸವ ಸಂಪನ್ನ

ಲೋಕಬಂಧು ನ್ಯೂಸ್, ಉಡುಪಿ
ಇತಿಹಾಸ ಪ್ರಸಿದ್ಧ ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಗುರುವಾರ ದೇವಳದ ಆಡಳಿತ ಮೊಕ್ತೇಸರರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉತ್ಸವದಲ್ಲಿ ಭಾಗವಹಿಸಿದ್ದರು.ಅನೇಕ ಮಂದಿ ಭಕ್ತಾದಿಗಳು ಭಾಗವಹಿಸಿದ್ದರು. ಮಠದ ದಿವಾನ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ವೆಂಕಟೇಶ ಆಚಾರ್ಯ ಮೊದಲಾದವರಿದ್ದರು.