ಕೃಷ್ಣಮಠಕ್ಕೆ ಭೀಮನಕಟ್ಟೆ ಶ್ರೀ ಭೇಟಿ

ಲೋಕಬಂಧು ನ್ಯೂಸ್, ಉಡುಪಿ
ತೀರ್ಥಹಳ್ಳಿಯ ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರತೀರ್ಥ ಶ್ರೀ ಪಾದರು ಶನಿವಾರ ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು  ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠದ ದಿವಾನ ಡಾ. ಉದಯ ಕುಮಾರ್ ಸರಳತ್ತಾಯ, ಮಠದ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಮೊದಲಾದವರಿದ್ದರು.