ಲೋಕಬಂಧು ನ್ಯೂಸ್, ಬೆಂಗಳೂರು
ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚದ ಆರೋಪದಲ್ಲಿ ಲೋಕಾಯುಕ್ತರಿಗೆ ಸಿಲುಕಿರುವ ಬಗ್ಗೆ ಪತ್ರಕರ್ತರಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.
ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಆದರೆ, ಈಗ ಬಿಜೆಪಿ ಶಾಸಕರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ. ಲೋಕಾಯುಕ್ತರ ತನಿಖೆ ನಡೆಯಲಿ ಎಂದು ಮುಖ್ಯಮಂತ್ರಿ ಹೇಳಿದರು.