ಬ್ರಹ್ಮಾವರ | ಲೋಕಬಂಧು ನ್ಯೂಸ್
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ 'ಉದಯವಾಣಿ"ಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ 'ವಿಜಯ ಕರ್ನಾಟಕ'ದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ಚುನಾವಣೆ ನಡೆಯಿತು.
ಉಪಾಧ್ಯಕ್ಷರಾಗಿ 'ಪ್ರಜಾವಾಣಿ'ಯ ಶೇಷಗಿರಿ ಭಟ್, ಕೋಶಾಧಿಕಾರಿಯಾಗಿ 'ವಿಜಯವಾಣಿ'ಯ ರವೀಂದ್ರ ಕೆ., ಕಾರ್ಯದರ್ಶಿಯಾಗಿ ಹರೀಶ್ ಕಿರಣ್ ತುಂಗ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಂಡಿಮಠ ಶಿವರಾಮ ಆಚಾರ್ಯ, ಉದಯ ಆಚಾರ್ಯ, ಅಲ್ತಾರು ನಾಗರಾಜ್, ಪ್ರವೀಣ್ ವಿ., ಅನಂತ ನಾಯಕ್ ಅವಿರೋಧವಾಗಿ ಆಯ್ಕೆಯಾದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಇದ್ದರು.