ಕಾಪು 'ಮಾತೃ ವೈಭವ'ಕ್ಕೆ ಚಪ್ಪರ ಮೂಹೂರ್ತ

ಲೋಕಬಂಧು ನ್ಯೂಸ್, ಕಾಪು
ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಳದಲ್ಲಿ ಫೆಬ್ರವರಿ 28ರಿಂದ ಮೊದಲ್ಗೊಂದು ಮಾರ್ಚ್ 2ರ ವರೆಗೆ ಮೂರು ದಿನಗಳ ಪರ್ಯಂತ ವಿಜೃಂಭಣೆಯಿಂದ ನಡೆಯುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ 'ಮಾತೃ ವೈಭವ' ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಫೆ.11ರಂದು ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ನೇತೃತ್ವದಲ್ಲಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿ ಚಪ್ಪರ ಮಹೂರ್ತ ನೆರವೇರಿಸಲಾಯಿತು.ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಮತ್ತು ಮಾತೃ ವೈಭವ ಸೇವಾ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ಲಾಲಾಜಿ ಆರ್. ಮೆಂಡನ್, ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮತ್ತು ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮನೋಹರ ಎಸ್. ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಶೇಖರ ಸಾಲ್ಯಾನ್, ಮನೋಹರ ರಾವ್ ಮತ್ತು ಚರಿತ ದೇವಾಡಿಗ, ಮಾತೃ ವೈಭವ ಸೇವಾ ಸಮಿತಿ ಕಾರ್ಯಾಧ್ಯಕ್ಷ ಭಗವಾನ್ ದಾಸ್, ಪ್ರಭಾಕರ ಎಸ್. ಪೂಜಾರಿ, ಲಕ್ಷ್ಮೀಶ ತಂತ್ರಿ , ಗೌರವ ಸಲಹೆಗಾರ ವಿಕ್ರಮ್ ಕಾಪು, ನಿರ್ಮಲ್ ಕುಮಾರ್ ಹೆಗ್ಡೆ, ಶ್ರೀಕರ ಶೆಟ್ಟಿ ಕಲ್ಯ, ಮಾತೃ ವೈಭವ ಸೇವಾ ಸಮಿತಿ  ಕಾರ್ಯದರ್ಶಿ ಜಯರಾಮ ಆಚಾರ್ಯ, ಪ್ರಮುಖರಾದ ಗೀತಾಂಜಲಿ ಎಂ. ಸುವರ್ಣ, ಸುಧಾಕರ ಶೆಟ್ಟಿ ಮಕರ, ಕೆ ವಿಶ್ವನಾಥ್, ಬೀನಾ ವಾಸುದೇವ ಶೆಟ್ಟಿ, ಸಾವಿತ್ರಿ ಗಣೇಶ್, ಡಾ. ಪ್ರಶಾಂತ್ ಶೆಟ್ಟಿ, ಅನಿಲ್ ಕುಮಾರ್ ಕಾಪು, ಕಿರಣ್ ಆಳ್ವ, ರವಿರಾಜ್ ಶೆಟ್ಟಿ ಪಂಜಿತ್ತೂರು, ಉದಯ ಹೆಗ್ಡೆ ಮಲ್ಲಾರ್, ಸುನಿಲ್ ಎಸ್. ಪೂಜಾರಿ ಮೊದಲಾದವರಿದ್ದರು.