ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಲೋಕಬಂಧು ನ್ಯೂಸ್, ಉಡುಪಿ
ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ಬಡವರ ಹಕ್ಕನ್ನು ಕಸಿಯಲು ಪ್ರಯತ್ನಿಸುತ್ತಿದೆ. ಈ ಹಿಂದಿನ ನರೇಗ ಯೋಜನೆಯನ್ನೇ ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭಟನಕಾರರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.


ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾ‌ರ್ ಸೊರಕೆ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಯೋಜನೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.


ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು, ಪ್ರಮುಖರಾದ ಎಂ.ಎ.ಗಫೂ‌ರ್, ರಮೇಶ್ ಕಾಂಚನ್, ಜ್ಯೋತಿ ಹೆಬ್ಬಾರ್, ಉದಯ ಕುಮಾರ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಸಾದರಾಜ್ ಕಾಂಚನ್ ಮೊದಲಾದರಿದ್ದರು.


ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮನವಿ ಸ್ವೀಕರಿಸಿದರು.