ಲೋಕಬಂಧು ನ್ಯೂಸ್, ಉಡುಪಿ
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ನಾಟಕಕಾರ, ಯಕ್ಷಗಾನ ಕಲಾವಿದ, ವೈದ್ಯ, ಸಂಘಟಕ, ಸಾಹಿತಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆಯಾಗಿದ್ದಾರೆ.
ಮೇ 3ರಂದು ನಗರದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಉಡುಪಿ ತಾಲೂಕು 16ನೇ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು ಎಂದು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜಿನಿ ವಸಂತ್ ತಿಳಿಸಿದ್ದಾರೆ.
