ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ನಿಧನ

ಕುಂದಾಪುರ | ಲೋಕಬಂಧು ನ್ಯೂಸ್
ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ, ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ (91) ಫೆಬ್ರವರಿ 7ರಂದು ಶನಿವಾರ ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.1935ರ ಡಿ.24ರಂದು ಜನಿಸಿದ ಅವರು 1960–83ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ಅಲ್ಲದೆ, ತಾಲೂಕು ಅಭಿವೃದ್ಧಿ ಬೋರ್ಡಿನ ಸದಸ್ಯರಾಗಿದ್ದರು‌.


ಜನತಾದಳದಿಂದ ಸ್ಪರ್ಧಿಸಿ,1983 -1994ರ ವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಸದಸ್ಯರಾಗಿದ್ದರು.


ಸಾಮಾಜಿಕ ಕ್ಷೇತ್ರದಲ್ಲೂ ತೊಡಗಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ‌ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾಟಕ, ಯಕ್ಷಗಾನ ಕಲಾಪೋಷಕರಾಗಿದ್ದರು.


ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.