ಚಿನ್ನ, ಫ್ಲ್ಯಾಟ್ ವ್ಯವಹಾರದಲ್ಲಿ ವಂಚನೆ: ದೂರು

ಲೋಕಬಂಧು ನ್ಯೂಸ್, ಉಡುಪಿ
ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ಯಾಪ್ ವ್ಯವಹಾರದಲ್ಲಿ ಲಾಭದಾಯಕ ಹೂಡಿಕೆ ಮಾಡಿಕೊಡುವುದಾಗಿ ಭರವಸೆ ನೀಡಿ ಹಣ ಪಡೆದು ಕೋಟ್ಯಾಂತರ ರೂ. ವಂಚಿಸಿದ ಪ್ರಕರಣ ವರದಿಯಾಗಿದೆ.ಮಮತಾ ಶೆಟ್ಟಿ ಎಂಬಾಕೆಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ.


ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಆಕೆಯ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.


ಮಮತಾ ಶೆಟ್ಟಿಯ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ ವರೆಗೆ ಹಂತ ಹಂತವಾಗಿ 4.78 ಕೋಟಿ ರೂ. ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ಯಾಪ್ ವ್ಯವಹಾರದಲ್ಲಿ ಲಾಭದಾಯಕ ಹೂಡಿಕೆ ಮಾಡಿಕೊಡುವುದಾಗಿ ಭರವಸೆ ನೀಡಿ ಹಣ ಪಡೆದು ನಂತರ ಯಾವುದೇ ಆಸ್ತಿಯನ್ನೂ ಖರೀದಿಸಿ ಕೊಡದೆ ವಂಚಿಸಿರುವುದಾಗಿ ಆರೋಪಿಸಲಾಗಿದೆ.


ಆ ಬಗ್ಗೆ 2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ತಡೆಯಾಜ್ಞೆ ತಂದಿದದ್ದರು ಎನ್ನಲಾಗಿದೆ.


ನಂತರ ಕಿಶೋ‌ರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎಂಬವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ.


ಪ್ರಸ್ತುತ ಸುಹಾಸಿನಿ ಮತ್ತು ಅಕೆಯ ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಮಮತಾ ಶೆಟ್ಟಿ, ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿದ್ದಾರೆ.


ಪ್ರಕರಣವನ್ನು ಮರು ಪರಿಶೀಲಿಸುವುದಾಗಿ ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭರವಸೆ ನೀಡಿದ್ದಾರೆ.