ಲೋಕಬಂಧು ನ್ಯೂಸ್, ಉಡುಪಿ
ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ, ಸಮಾಜ ಸೇವಕ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಮಂತ್ರಾಲಯದಲ್ಲಿ ನಡೆದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 431ನೇ ವರ್ಧಂತಿ ಸಂದರ್ಭದಲ್ಲಿ ಮಂತ್ರಾಲಯದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಶ್ರೀಗುರು ಅನುಗ್ರಹ ಪ್ರಶಸ್ತಿ' ನೀಡಿ ಗೌರವಿಸಿದರು.ಸಹಕಾರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡುವ ಜೊತೆಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಕೊಂಡಿರುವ ಜಯಕರ ಶೆಟ್ಟಿ ಇಂದ್ರಾಳಿ ಅವರು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾಗಿ, ತುಳುಕೂಟ ಉಡುಪಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.
ಸಹಕಾರ ರತ್ನ ಮುಂತಾದ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.