ಲೋಕಬಂಧು ನ್ಯೂಸ್, ಬೆಳ್ತಂಗಡಿ
ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿ ಬಂಟ್ವಾಳ ನ್ಯಾಯಾಲಯ ಆದೇಶ ಹೊರಡಿಸಿದೆ.ದ್ವೇಷ ಭಾಷಣ ಮಾಡಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ, ಮಹೇಶ್ ಶೆಟ್ಟಿ ವಿರುದ್ಧ ವಾರೆಂಟ್ ಜಾರಿ ಮಾಡಿತ್ತು.