ಲೋಕಬಂಧು ನ್ಯೂಸ್, ಉಡುಪಿ
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಸಂಯುಕ್ತ ಅಶ್ರಯದಲ್ಲಿ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆದ 'ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ' ಕಾರ್ಯಕ್ರಮದಲ್ಲಿ ರಂಗಭೂಮಿ ಉಡುಪಿ ಅಧ್ಯಕ್ಷ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಸಮಾಜ ಸೇವೆ, ಯಕ್ಷಗಾನ, ಜಾನಪದ, ಧಾರ್ಮಿಕ ಮೊದಲಾದ ರಂಗಗಳಲ್ಲಿ ನೀಡಿದ ಸೇವೆಯನ್ನು ಗುರುತಿಸಿ ಭಾರತ ರಂಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಕೆ.ವಿ. ನಾಗರಾಜ ಮೂರ್ತಿ, ಕಲಾವಿದರಾದ ಸಿಹಿಕಹಿ ಚಂದ್ರು, ಸಿಹಿಕಹಿ ಗೀತಾ, ಚಲನಚಿತ್ರ ನಿರ್ದೇಶಕ ಕೆ.ಶಿವರುದ್ರಯ್ಯ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸಂಚಾಲಕ ರವೀಂದ್ರನಾಥ್ ಸಿರಿವರ, ಡಾ.ಟಿ.ಎಚ್. ಲವಕುಮಾರ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಶಿವನಾಯಕ ದೊರೆ, ರಿಜಿಸ್ಟ್ರಾರ್ ಬಿ. ನೀಲಮ್ಮ, ಚಾಂದ್ ಬಾಷಾ, ಭಾರತ ರಂಗ ಮಹೋತ್ಸವ ಸಂಚಾಲಕಿ ಡಾ. ವೀಣಾ ಶರ್ಮ ಭೂಸನೂರಮಠ ಮೊದಲಾದವರಿದ್ದರು.