ಲೋಕಬಂಧು ನ್ಯೂಸ್, ಬ್ರಹ್ಮಾವರ
'ಪ್ರಜಾವಾಣಿ'ಯ ಬ್ರಹ್ಮಾವರ ಬಿಡಿ ಸುದ್ದಿಗಾರ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಶೇಷಗಿರಿ ಭಟ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲರೂ ಆಗಿದ್ದ ಅವರು ಸೌಮ್ಯ ಸ್ವಭಾವದವರಾಗಿದ್ದರು.
ಶೇಷಗಿರಿ ಭಟ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಭಟ್ ಕುರ್ಯ ಸಹಿತ ಜಿಲ್ಲೆಯ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.