ಲೋಕಬಂಧು ನ್ಯೂಸ್, ಕಾಪು
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ 'ಪ್ರಜಾವಾಣಿ'ಯ ಹಮೀದ್ ಪಡುಬಿದ್ರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ 'ಹೊಸದಿಗಂತ'ದ ಪುಂಡಲೀಕ ಮರಾಠೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಕಾಪು ಪತ್ರಿಕಾ ಭವನದಲ್ಲಿ ಚುನಾವಣೆ ನಡೆಯಿತು.
ಉಪಾಧ್ಯಕ್ಷರಾಗಿ 'ವಿಜಯವಾಣಿ'ಯ ಹೇಮನಾಥ ಪಡುಬಿದ್ರೆ, ಕೋಶಾಧಿಕಾರಿಯಾಗಿ 'ಸ್ಪಂದನ ಟಿವಿ'ಯ ಸಂತೋಷ್ ನಾಯ್ಕ್, ಕಾರ್ಯದರ್ಶಿಯಾಗಿ 'ಉದಯವಾಣಿ'ಯ ಸತೀಶ್ಚಂದ್ರ ಶೆಟ್ಟಿ ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಮಚಂದ್ರ ಆಚಾರ್ಯ, ರಾಕೇಶ್ ಕುಂಜೂರು, ಹರಿಶ್ಚಂದ್ರ ಕಟಪಾಡಿ, ಪ್ರಕಾಶ್ ಸುವರ್ಣ ಅವಿರೋಧವಾಗಿ ಆಯ್ಕೆಯಾದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್ ಎರ್ಮಾಳ್, ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಆಚಾರ್ಯ ಉಚ್ಚಿಲ ಮತ್ತು ಪ್ರಮೋದ್ ಸುವರ್ಣ ಇದ್ದರು.