ಲೋಕಬಂಧು ನ್ಯೂಸ್, ಹೆಬ್ರಿ
ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆ.21ರಂದು ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲ ಪ್ರಯುಕ್ತ ಶುಕ್ರವಾರ ಮೃತ್ಯುಂಜಯ ಹೋಮ, ಕೂಷ್ಮಾಂಡ ಯಾಗ, ಭೂತನಾಥ ಪ್ರೀತಿಕರ ಪ್ರತ್ಯಕ್ಷ ಅಶ್ವಪೂಜಾ, ಪ್ರಸನ್ನಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಗಳು ವಿದ್ವಾನ್ ಕೊರಂಗ್ರಪಾಡಿ ಕೆ.ಪಿ. ಕುಮಾರಗುರು ತಂತ್ರಿ ಮಾರ್ಗದರ್ಶನದಲ್ಲಿ ಎಳ್ಳಾರೆ ವಾಸುದೇವ ಭಟ್ ಸಹಯೋಗದಲ್ಲಿ ನಡೆಯಿತು.ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ.ಜಿ. ರಾಮಕೃಷ್ಣ ಆಚಾರ್, ಸವಿತಾ ಆರ್. ಆಚಾರ್ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.