ಲೋಕಬಂಧು ನ್ಯೂಸ್, ಉಡುಪಿ
ಮಹಾಶಿವರಾತ್ರಿ ಅಂಗವಾಗಿ ಇಲ್ಲಿನ ರಥಬೀದಿಯ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೇಶ್ವರ ದೇವಳದಲ್ಲಿ ಮಹಾರಂಗಪೂಜೆ ನಡೆಯಿತು.ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಪುತ್ತಿಗೆ ಮಠಾಧೀಶ ಯತಿಕುಲಚಕ್ರವರ್ತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಿದರು.
ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ವೆಂಕಟೇಶ ಆಚಾರ್ಯ ಮೊದಲಾದವರಿದ್ದರು.