ಶೃಂಗೇರಿಯಲ್ಲಿ ವೈಭವದ ಮಹಾಶಿವರಾತ್ರಿ‌ ಮಹೋತ್ಸವ

ಶೃಂಗೇರಿ | ಲೋಕಬಂಧು ನ್ಯೂಸ್
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾಪೀಠದಲ್ಲಿ ಭಾನುವಾರ ಮಹಾಶಿವರಾತ್ರಿ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಮತ್ತು ಜಗದ್ಗುರು ಶ್ರೀ ವಿಧುಶೇಖರಭಾರತಿ ಸನ್ನಿಧಾನಂಗಳವರು ವಿಶೇಷ ಪೂಜೆ ನಡೆಸಿದರು.
ರುದ್ರಪಾರಾಯಣ, ರುದ್ರಾಭಿಷೇಕ, ಶಿವಪಂಚಾಕ್ಷರೀ ಪಠನ ಇತ್ಯಾದಿ ನಡೆಯಿತು.
ಕ್ಷೇತ್ರದ ಶ್ರೀ ಮಲಹಾನಿಕರೇಶ್ವರ ಸನ್ನಿಧಿಯಲ್ಲಿಯೂ ಮಹಾಶಿವರಾತ್ರಿ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು.