ಗೋಧಾಮದಿಂದ ಮುನಿಯಾಲಿಗೆ ಜಾಗತಿಕ ಮಟ್ಟದಲ್ಲಿ ಹೆಸರು

ಹೆಬ್ರಿ | ಲೋಕಬಂಧು ನ್ಯೂಸ್
ಯುವ ಸಮುದಾಯವನ್ನು ಕೃಷಿಯತ್ತ ಆಕರ್ಷಿಸಲು ವಿಶೇಷ ಯೋಚನೆ- ಯೋಜನೆ ಮೂಲಕ ಗ್ರಾಮೀಣ ಪ್ರದೇಶವಾದ ಮುನಿಯಾಲಿನಲ್ಲಿ ಸಂಜೀವಿನಿ ಗೋಧಾಮವನ್ನು ಕೃಷಿ ಸಂಶೋಧನಾ ಕೇಂದ್ರದಂತೆ ನಿರ್ಮಿಸಿದ್ದಾರೆ. ಆ ಮೂಲಕ ಕೈಗಾರಿಕೋದ್ಯಮಿಯೊಬ್ಬರು ಕೃಷಿಗೆ ಆದ್ಯತೆ ನೀಡುತ್ತಿರುವುದು ಮಹಾಕಾರ್ಯ. ಗೋಧಾಮದ ಮೂಲಕ ಮುನಿಯಾಲಿನ ಹೆಸರು ಜಾಗತಿಕ ಮಟ್ಟದಲ್ಲಿ ರಾರಾಜಿಸುವಂತಾಗಿದೆ ಎಂದು ಕಾರ್ಕಳದ ಕಾಂಗ್ರೆಸ್‌ ನಾಯಕ, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್‌ ಟ್ರಸ್ಟ್‌ ಪ್ರವರ್ತಕ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಹೇಳಿದರು.
ಮುನಿಯಾಲಿನ ಸಂಜೀವಿನಿ ಗೋಧಾಮದಲ್ಲಿ ಫೆ. 19ರಿಂದ 21ರ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆ ವೀಕ್ಷಿಸಿ ಮಾತನಾಡಿದರು.


ರೈತರು, ಕೃಷಿ ಮತ್ತು ಯುವ ಸಮುದಾಯವನ್ನು ಕೃಷಿಯತ್ತ ಮರಳಿ ತಂದು ಬದುಕು ಕಟ್ಟಲು ಪ್ರೇರಣೆ ನೀಡುವ ಮಹಾಸಂಕಲ್ಪದಿಂದ ನಡೆಯುವ ಪಾರಂಪರಿಕ ಶ್ರೀಮನ್ನಾಗಮಂಡಲವನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದವರು ಹೇಳಿದರು.
ಮುನಿಯಾಲು ಗೋಧಾಮದ ಸಂಸ್ಥಾಪಕ ಡಾ.ಜಿ.ರಾಮಕೃಷ್ಣ ಆಚಾರ್‌, ಸವಿತಾ ರಾಮಕೃಷ್ಣ ಆಚಾರ್‌, ನಮಿತಾ ಉದಯ ಕುಮಾರ್‌ ಶೆಟ್ಟಿ, ಶ್ರೀಕಾಂತ್‌ ಶೆಟ್ಟಿ ಕಾರ್ಕಳ, ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುನಿಯಾಲು ಗೋಪಿನಾಥ ಭಟ್‌, ಪಡುಕುಡೂರು ಪ್ರಸನ್ನ ಶೆಟ್ಟಿ, ಭಾರವಿ ಶೆಟ್ಟಿ, ಕಡ್ತಲ ಸುನಿಲ್ ಹೆಗ್ಡೆ, ಕುಕ್ಕುಜೆ ಸಂಪತ್‌ ಪೂಜಾರಿ, ಎಳ್ಳಾರೆ ನಾರಾಯಣ ಆಚಾರ್‌ ಮೊದಲಾದವರಿದ್ದರು.