ಕಾಂಗ್ರೆಸ್ ಪಕ್ಷದಿಂದ ನವಜೋತ್ ಕೌ‌ರ್ ಸಿಧು ಉಚ್ಚಾಟನೆ

ಲೋಕಬಂಧು ನ್ಯೂಸ್, ಹರ್ಯಾಣ
ಪಂಜಾಬ್‌ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೀಲ್ ಅವರು ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಫೆಬ್ರವರಿ 6ರಂದು ಶುಕ್ರವಾರ ಮಾತನಾಡಿದ ಅವರು, ಪಕ್ಷದ ಶಿಸ್ತು ಎಲ್ಲಕ್ಕಿಂತ ಮುಖ್ಯ. ಕಾಂಗ್ರೆಸ್‌ ಹಾಕಿದ ಗೆರೆ ದಾಟುವವರು, ಪಕ್ಷದ ವಿರುದ್ಧ ಕೆಲಸ ಮಾಡುವ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.


ನವಜೋತ್ ಕೌರ್ ಸಿಧು ರಾಹುಲ್ ಗಾಂಧಿಯನ್ನು `ಪಪ್ಪು' ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ.