ಲೋಕಬಂಧು ನ್ಯೂಸ್, ಬೆಂಗಳೂರು
ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರದ ಕುತಂತ್ರವನ್ನು ರಾಜ್ಯದ ರೈತರು ವಿರೋಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಫೆಬ್ರವರಿ 6ರಂದು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ರೈತರಿಗೆ ಉತ್ತಮವಾದ ಬಿತ್ತನೆ ಬೀಜ, ಗೊಬ್ಬರ, ಔಷದಿ, ಸರ್ಕಾರ ಒದಗಿಸುತ್ತಿದ್ದು, ಯಂತ್ರೋಪಕರಣಗಳ ಖರೀದಿಗೆ 1,500 ಕೋಟಿ ಸಹಾಯಧನ ನೀಡಲಾಗುತ್ತಿದೆ. ಬೆಳೆ ವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6 ಸಾವಿರ ಕೋಟಿ ರೂ.ಗಳ ವಿಮೆ ಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ ಎಂದರು.