ಬ್ಯಾಲೆಟ್‌ ಪೇಪರ್‌ನಲ್ಲಿ ಪಂಚಾಯತ್ ಚುನಾವಣೆ: ಮಸೂದೆಗೆ ಕ್ಯಾಬಿನೆಟ್ ಒಪ್ಪಿಗೆ

ಲೋಕಬಂಧು ನ್ಯೂಸ್, ಬೆಂಗಳೂರು
ಗ್ರಾಮ ಪಂಚಾಯತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್‌ನಲ್ಲಿ ನಡೆಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯತ್, ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಯಲ್ಲೂ ಎಲೆಕ್ಟ್ರಾನಿಕ್ ಮತಯಂತ್ರ ಬದಲಿಗೆ ಮತಪತ್ರ ಬಳಕೆಗೆ ಅವಕಾಶ ಕಲ್ಪಿಸುವ 'ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ತಿದ್ದುಪಡಿ ಮಸೂದೆ-2026'ಕ್ಕೆ ಸಂಪುಟ ಅನುಮೋದನೆ ನೀಡಿದೆ.‌


ಬಹುತೇಕ ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್‌ನಲ್ಲಿ ಮುಗಿಯಲಿದೆ.