ನಾನು ಸಿಎಂ ಆಗಬೇಕೆಂಬ ಕನಸು ಜನರಿಗೂ ಇದೆ

ಮಂಗಳೂರು | ಲೋಕಬಂಧು ನ್ಯೂಸ್
ನಾನು ಸಿಎಂ ಆಗಬೇಕೆಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ. ಮಾತ್ರವಲ್ಲ ಮಾಧ್ಯಮದವರಿಗೂ ಇದೆ. ಆದರೆ, ಪಕ್ಷ ಏನು ಹೇಳುತ್ತದೆ ಎಂದು ಕೇಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹೇಳಿದರು.
ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂದು ಶನಿವಾರ ಮಾಧ್ಯಮದವರು ಕೇಳಿದಾಗ ಹೀಗೆ ಪ್ರತಿಕ್ರಿಯಿಸಿದರು.


ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಅದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯ ಕೇಳಿಲ್ಲ ಎಂದು ಡಿಕೆಶಿ ಹೇಳಿದರು.


ದಲಿತ ಸಂಘಟನೆಗಳು ಪರಮೇಶ್ವರ್ ಸಿಎಂ ಆಗಬೇಕು ಎಂದು ಆಸೆ ಪಟ್ಟಿರುವ ಬಗ್ಗೆ ಕೇಳಿದಾಗ, ಅವರವರ ಅಭಿಮಾನಿಗಳು ಆಸೆಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ ಎಂದರು.


ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂದು ಕೇಳಿದಾಗ ಸಮಯವೇ ಉತ್ತರ ನೀಡಲಿದೆ ಎಂದರು.