ಲೋಕಬಂಧು ನ್ಯೂಸ್, ಮಂಗಳೂರು
ಕಾರ್ಕಳದಲ್ಲಿ ಸುಮಾರು 800 ವರ್ಷಗಳ ಹಿಂದೆ ಪ್ರತಿಷ್ಠಾಪಿಸಲ್ಪಟ್ಟ ಭಗವಾನ್ ಶ್ರೀ ಬಾಹುಬಲಿಸ್ವಾಮಿಯ ಅದ್ಭುತ ಶಿಲಾಮೂರ್ತಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರ ಅನುದಾನ ಮಂಜೂರು ಮಾಡುವಂತೆ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಮನವಿ ಮಾಡಿದ್ದಾರೆ.ಧಾರ್ಮಿಕ ನೆಲೆಯ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಕಾರ್ಕಳ ಭಗವಾನ್ ಶ್ರೀ ಬಾಹುಬಲಿಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ವಿಶೇಷ ಅನುದಾನವನ್ನು ಕರ್ನಾಟಕ ಸರಕಾರದ ವತಿಯಿಂದ ಬಿಡುಗಡೆಗೊಳಿಸುವಂತೆ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರನ್ನು ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಫೆಬ್ರವರಿ 3ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ವೃಷಭದೇವ ಅಧಿಕಾರಿ ವರಂಗ ಇದ್ದರು.