ಲೋಕಬಂಧು ನ್ಯೂಸ್, ಉಡುಪಿ
ಇಲ್ಲಿನ ಆದಿಮ ಕಲಾ ಟ್ರಸ್ಟ್ ವತಿಯಿಂದ ನೀಡುವ 'ಆದಿಮ ಕಲಾರತ್ನ' ಚೊಚ್ಚಲ ಪ್ರಶಸ್ತಿಗೆ ಭಾರತೀಯ ಪುರಾತತ್ವ ವಿದ್ವಾಂಸ ಡಾ.ರವೀಂದ್ರ ಕೋರಿಸೆಟ್ಟರ್ ಆಯ್ಕೆಯಾಗಿದ್ದಾರೆ.ಪ್ರಶಸ್ತಿ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಹೊಸಪೇಟೆಯವರಾದ ಕೋರಿಸೆಟ್ಟರ್ ಪೂನಾದ ಡೆಕ್ಕನ್ ಕಾಲೇಜಿನಲ್ಲಿ ಸ್ನಾತಕೋತ್ತರ ಮತ್ತು ಪಿ.ಎಚ್.ಡಿ. ಪದವಿ ಗಳಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪುರಾತತ್ವ ಪ್ರಾಧ್ಯಾಪಕರಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದರು.
ವಿವಿಧ ಅಧ್ಯಯನ ಪೀಠಗಳ ಮುಖ್ಯಸ್ಥರಾಗಿ, ಪ್ರಸ್ತುತ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಂಗನಕಲ್ಲು ಉತ್ಖನನ ಅವರ ಬಹುಮುಖ್ಯ ಕೊಡುಗೆಗಳಲ್ಲಿ ಒಂದಾಗಿದ್ದು, ಬಳ್ಳಾರಿಯ ರಾಬರ್ಟ್ ಬ್ರೂಸ್ ಫೂಟ್ ಪುರಾತತ್ವ ವಸ್ತುಸಂಗ್ರಹಾಲಯ ಸ್ಥಾಪನೆಯಲ್ಲಿ ಅವರ ಕೊಡುಗೆಯೂ ಇದೆ.