ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ ನಿಧನ

ಬೆಂಗಳೂರು | ಲೋಕಬಂಧು ನ್ಯೂಸ್
ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ (93) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅಸೌಖ್ಯದಿಂದ ಫೆಬ್ರವರಿ 10ರಂದು ಮಂಗಳವಾರ ನಿಧನರಾದರು.
ವಿವಿಧ ಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ಅಸುನೀಗಿದರು ಎಂದು ಅವರ ಪುತ್ರ ಡಾ.ಬಾಲಾಜಿ ತಿಳಿಸಿದ್ದಾರೆ.


1933ರ ಸೆ. 12ರಂದು ಜನಿಸಿದ ರಾಮಯ್ಯ ಅವರಿಗೆ ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಇದ್ದಾರೆ.


'ದಿ ಹಿಂದೂ' ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ, ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು.


ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದರು. ಪತ್ರಿಕಾ ಅಕಾಡೆಮಿ ಹಾಗೂ ಪತ್ರಕರ್ತರ ವಿವಿಧ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿ ಅಧ್ಯಕ್ಷರಾಗಿದ್ದ ರಾಮಯ್ಯ, ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದರು.