ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ರೈಲು‌

ಲೋಕಬಂಧು ನ್ಯೂಸ್, ಬೆಂಗಳೂರು
ಮಹಾಶಿವರಾತ್ರಿ ಹಬ್ಬದ ಸಂದರ್ಭ ಯಶವಂತಪುರ- ಮಡಗಾಂವ್ ಜಂಕ್ಷನ್- ಯಶವಂತಪುರ ನಡುವೆ ಕೊಂಕಣ ರೈಲ್ವೆ ಸಹಯೋಗದೊಂದಿಗೆ ನೈಋತ್ಯ ರೈಲ್ವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ.ರೈಲು ನಂ.06507 ಯಶವಂತಪುರ- ಮಡಗಾಂವ್ ಜಂಕ್ಷನ್ ಎಕ್ಸ್‌ಪ್ರೆಸ್‌ ವಿಶೇಷ ರೈಲು ಫೆ.13ರಂದು ಅಪರಾಹ್ನ 12:30ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಮುಂಜಾನೆ 6:45ಕ್ಕೆ ಮಡಗಾಂವ್ ತಲುಪಲಿದೆ. 


ರೈಲು ನಂ.06508 ಮಡಗಾಂವ್‌ ಜಂಕ್ಷನ್- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಫೆ.16ರ ಬೆಳಗ್ಗೆ 11 ಗಂಟೆಗೆ ಮಡಗಾಂವ್‌ ಜಂಕ್ಷನ್‌ನಿಂದ ಹೊರಟು ಮರುದಿನ ಮುಂಜಾನೆ 4:45ಕ್ಕೆ ಯಶವಂತಪುರ ತಲುಪಲಿದೆ.