ಲೋಕಬಂಧು ನ್ಯೂಸ್, ಮೈಸೂರು
ನಮ್ಮ ತಂದೆಯವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಫೆಬ್ರವರಿ 6ರಂದು ಶುಕ್ರವಾರ ಮಾತನಾಡಿದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಐದು ವರ್ಷಗಳ ಕಾಲ ಪೂರ್ಣಾವಧಿಗೆ ಮುಂದುವರಿಯಲಿದ್ದಾರೆ.ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದ್ದು, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ.
ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ಲಭಿಸಿದ್ದು, ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಮುನ್ನಡೆಸಲಿದ್ದಾರೆ ಎಂದರು.
