ಪತ್ರಕರ್ತರ ಸಂಘಕ್ಕೆ ಮೂವರ ನಾಮನಿರ್ದೇಶನ

 ಉಡುಪಿ | ಲೋಕಬಂಧು ನ್ಯೂಸ್
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕಗಳ ಚುನಾವಣೆಯಲ್ಲಿ ಸ್ಪರ್ಧೆ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಮೂವರನ್ನು ನಾಮನಿರ್ದೇಶಿಸಿ, ಜಿಲ್ಲಾ ಕಾರ್ಯಕಾರಿ ಸಮಿತಿಗೆ ಸೇರ್ಪಡೆಗೊಳಿಸಲಾಯಿತು.
ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ಫೆ.23ರಂದು ಸೋ‌ಮವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ವಿಶೇಷ ಸಭೆಯಲ್ಲಿ ಹರೀಶ್ ಹೆಜಮಾಡಿ, ಗಣೇಶ್ ಸಾಬರಕಟ್ಟೆ ಹಾಗೂ ಕೃಷ್ಣ ಅಜೆಕಾರ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟನೆ ತಿಳಿಸಿದೆ.