ಲೋಕಬಂಧು ನ್ಯೂಸ್, ಉಡುಪಿ
ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಅವರು ಗುರುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.