ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠ ಆಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 15ರಂದು ಜಾಗರಣೆ ನಡೆಯಲಿದ್ದು, ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆ ತನಕ ಅಖಂಡ ಶಿವರಾತ್ರಿ ಉತ್ಸವ ನಡೆಯಲಿದೆ ಎಂದು ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.ಶಿವರಾತ್ರಿಯನ್ನು ವೈಭವದಿಂದ ಆಚರಿಸುವ ಸಂಕಲ್ಪ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರದು. ಹಾಗಾಗಿ ಕೃಷ್ಣಮಠದ ರಾಜಾಂಗಣದಲ್ಲಿ ನಿರಂತರ ಪಾರಾಯಣ, ಉಪನ್ಯಾಸ, ಭಜನೆ, ಪೂಜೆ ಕಾರ್ಯಕ್ರಮಗಳು ನಡೆಯಲಿದೆ. ವಿಷ್ಣು ಸಹಸ್ರನಾಮ ಪಾರಾಯಣ, ಶಿವ ಪಂಚಾಕ್ಷರಿ ಮಂತ್ರ ಜಪ ಹಮ್ಮಿಕೊಳ್ಳಲಾಗಿದೆ. ಶ್ರೀಗಳ ಉಪನ್ಯಾಸವೂ ಇರಲಿದೆ ಎಂದು ಡಾ.ಸರಳತ್ತಾಯ ತಿಳಿಸಿದರು.
ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಇದ್ದರು.