ಯತೀಂದ್ರ ನಮ್ಮ ಹೈಕಮಾಂಡ್!

ಲೋಕಬಂಧು ನ್ಯೂಸ್, ಮಂಗಳೂರು
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರೇ ನಮ್ಮ ಕಾಂಗ್ರೆಸ್ ಹೈಕಮಾಂಡ್ ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಮುಂದಿನ ಐದು ವರ್ಷಗಳಿಗೆ ಸಿದ್ದರಾಮಯ್ಯ ಅವರೇ ಸಿಎಂ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಈ ಬಗ್ಗೆ ಯಾವುದೇ ಊಹಾಪೋಹ ಇಲ್ಲ ಎಂಬ ಯತೀಂದ್ರ ಹೇಳಿಕೆಗೆ ಫೆಬ್ರವರಿ 6ರಂದು ಶುಕ್ರವಾರ ಪತ್ರಿಕ್ರಿಯಿಸಿದರು.


ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದು ತಿರಗೇಟು ನೀಡಿದರು.