ಲೋಕಬಂಧು ನ್ಯೂಸ್ ಉಡುಪಿ, ಮಾ.12
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ಹಿನ್ನೆಲೆಯಲ್ಲಿ ಕಮರ್ಷಿಯಲ್ ಎಲ್.ಪಿ.ಜಿ. ಗ್ಯಾಸ್ ಸಿಲಿಂಡರ್'ಗಳ ಅಲಭ್ಯತೆಯಿಂದಾಗಿ ಹೋಟೆಲ್, ರೆಸ್ಟೋರೆಂಟ್ ಇತ್ಯಾದಿಗಳನ್ನು ನಡೆಸುವುದು ಕಷ್ಟಕರವಾಗುತ್ತಿದೆ.ಪ್ರಸ್ತುತ ಎದುರಾಗಿರುವ ಈ ದೊಡ್ಡ ಸಮಸ್ಯೆ ಹಿನ್ನಲೆಯಲ್ಲಿ ಈ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ವತಿಯಿಂದ ಮಾ.13ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹೋಟೆಲ್ ಡಯಾನದಲ್ಲಿ ಹೋಟೆಲ್ ಮಾಲಕರ ಸಭೆ ಕರೆಯಲಾಗಿದೆ ಎಂದು ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.