ಮಾ.7ರಂದು ಸಾಮೂಹಿಕ ಪ್ರಾರ್ಥನೆ

ಕಾಪು | ಲೋಕಬಂಧು ನ್ಯೂಸ್
ಉಡುಪಿ ಕಂಬಳ ಸೇರಿದಂತೆ ವಿವಿಧ ಕಾರಣಗಳಿಗಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ವಿರುದ್ಧ ದುರುದ್ದೇಶಪೂರಿತ ರಾಜಕೀಯ ಸುಳ್ಳು ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 7ರಂದು ಅಪರಾಹ್ನ 3 ಗಂಟೆಗೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಹಾಗೂ 3.30ಕ್ಕೆ ಕಟಪಾಡಿ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.