ಲೋಕಬಂಧು ನ್ಯೂಸ್ | ಕಾರ್ಕಳ, ಮಾ.20
ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಐದನೇ ಅಂಗಸಂಸ್ಥೆ ಅಜೆಕಾರು ಪದ್ಮನಗರದಲ್ಲಿನ ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ 2026- 27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಿಸಲು ಶಾಲಾ ಶಿಕ್ಷಣ ಇಲಾಖೆಯಿಂದ ಅನುಮೋದನೆ ಪಡೆದಿದೆ.
ಅಜೆಕಾರಿನ ಪದ್ಮನಗರದಲ್ಲಿ ಟ್ರಸ್ಟ್‌ನ 4ನೇ ಕ್ಯಾಂಪಸ್ ನಿರ್ಮಾಣಗೊಂಡಿದ್ದು, ಟ್ರಸ್ಟ್‌ನ ಸಮಾಜಸೇವೆ ಮತ್ತು ಶೈಕ್ಷಣಿಕ ಕಾಳಜಿಯ ಭಾಗವಾಗಿ ಅಜೆಕಾರು ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ ಉಚಿತ ಶಿಕ್ಷಣ ನೀಡಲಾಗುವುದು.
ಟ್ರಸ್ಟ್ ಕಳೆದ 15 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ನೀಡುವುದರೊಂದಿಗೆ ಅನೇಕ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಿದ್ಯಾರ್ಥಿ ವೇತನ ನೀಡುತ್ತಾ ಬಂದಿದೆ. ಅದರ ಮುಂದುವರಿದ ಭಾಗವಾಗಿ ಪ್ರಸ್ತುತ 8ನೇ ತರಗತಿ ಪೂರ್ಣಗೊಳಿಸಿ 9ನೇ ತರಗತಿಗೆ ಅಜೆಕಾರ್ ಜ್ಞಾನಸುಧಾ ಸಂಸ್ಥೆಯಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳು ಎಂಟನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಪೋಷಕರೊಂದಿಗೆ ಶಾಲಾ ಏಪ್ರಿಲ್ 30ರೊಳಗೆ ಶಾಲಾ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 7992920707ನ್ನು ಸಂಕರ್ಕಿಸುವಂತೆ ಸಂಸ್ಥೆ ಪ್ರಕಟನೆ ತಿಳಿಸಿದೆ.
