ಸುಧೀಂದ್ರತೀರ್ಥರ ಆರಾಧನೆ

ಲೋಕಬಂಧು ನ್ಯೂಸ್, ಉಡುಪಿ
ಪುತ್ತಿಗೆ ಮಠದ ಪೂರ್ವಯತಿ ಶ್ರೀ ಸುಧೀಂದ್ರತೀರ್ಥ ಶ್ರೀಪಾದರ ಆರಾಧನೆ ಪ್ರಯುಕ್ತ ‌ಶ್ರೀಕೃಷ್ಣ ಮಠದ ಸಮುಚ್ಚಯದಲ್ಲಿರುವ ಅವರ ವೃಂದಾವನಕ್ಕೆ ಪುತ್ತಿಗೆ  ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ ವಿಶೇಷ ಪೂಜೆ ಸಲ್ಲಿಸಿದರು.ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗುರುಗಳಾದ ಶ್ರೀ ಸುಧೀಂದ್ರತೀರ್ಥ ಮಹಾಸ್ವಾಮಿಗಳು ಶತಾಯುಷಿಗಳಾಗಿದ್ದು ಅಭಿನವ ಋಷ್ಯಶೃಂಗ, ಅಕ್ಷರಕೋಟಿ ಕೃಷ್ಣಮಂತ್ರೋಪಾಸಕ, ಯತಿಕುಲ ಚಕ್ರವರ್ತಿ, ತಪಶ್ಚಕ್ರವರ್ತಿ ಇತ್ಯಾದಿ ಬಿರುದಾಂಕಿತರಾಗಿದ್ದರು.