ಕೃಷ್ಣಮಠಕ್ಕೆ ಬಾಳೆಗಾರು ಯತಿ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಮಾ.13
ಬಾಳೆಗಾರು ಮಠದ ಶ್ರೀ ಅಕ್ಷೋಭ್ಯ ರಾಮಪ್ರಿಯತೀರ್ಥ ಶ್ರೀಪಾದರು ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು.


ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಮೊದಲಾದವರಿದ್ದರು.