ಸರ್ವಾಂಗೀಣ ಅಭಿವೃದ್ಧಿ ಚಿಂತನೆಯ ಬಜೆಟ್

ಉಡುಪಿ | ಲೋಕಬಂಧು ನ್ಯೂಸ್
ಆರೋಗ್ಯ, ಶಿಕ್ಷಣ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಒತ್ತುನೀಡಿ ಅನುದಾನ ಬಿಡುಗಡೆ ಮಾಡಿರುವ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿರುವ ಬಜೆಟ್ ಸರ್ವಾಂಗೀಣ ಚಿಂತನೆಯ ಬಜೆಟ್ ಎಂದು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ, ಕುಕ್ಕೆ ಮತ್ತು ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ, ಪುತ್ತೂರಿಗೆ 300 ಹಾಸಿಗೆಗಳ ಆಸ್ಪತ್ರೆ, ಶಾಲೆಗಳ ಉನ್ನತೀಕರಣ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಜಾನಪದ ಸಂಗಮ, ಅನಂತಮೂರ್ತಿ ಮತ್ತು ಕುವೆಂಪು ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ, ಮೆಟ್ರೋ ಅಭಿವೃದ್ಧಿ, ಕೃಷಿ ಇಲಾಖೆಗೆ ಅನುದಾನ, ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿ, ವೈಷ್ಣೋದೇವಿ ಯಾತ್ರೆಗೆ ಅನುದಾನ, ಕರಾವಳಿ ಪ್ರದೇಶದ ಸಮುದ್ರ ಕೃಷಿಗೆ  ಪ್ರೋತ್ಸಾಹಕ ಅನುದಾನ, ಮೀನುಗಾರಿಕೆ ಸಲಕರಣೆ ಕಿಟ್ ದರ ಹೆಚ್ಚಳ ಜೊತೆಗೆ ದ.ಕ., ಉಡುಪಿ, ಉತ್ತರ ಕನ್ನಡ ಹಾಗೂ ಬಾಗಲಕೋಟೆಗಳಲ್ಲಿ ಮೀನು ಮಾರುಕಟ್ಟೆ ನಿರ್ಮಾಣ ಹೀಗೆ ಎಲ್ಲಾ ವರ್ಗಗಳನ್ನು ಬಜೆಟ್‌ನಲ್ಲಿ ಪರಿಗಣಿಸಲಾಗಿರುವ ಉತ್ತಮ ಬಜೆಟ್ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.