ಲೋಕಬಂಧು ನ್ಯೂಸ್, ಉಡುಪಿ
ಗೃಹಬಳಕೆ ವಸ್ತುಗಳಲ್ಲಿ ಪ್ರಮುಖವಾದ ಅಡುಗೆ ಅನಿಲ (ಎಲ್.ಪಿ.ಜಿ) ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡಿಸಿದೆ.ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ಭಾರತದಲ್ಲಿ ಇಂಧನ ಕೊರತೆ ಇಲ್ಲ. ಆದ್ದರಿಂದ ನಮ್ಮ ಇಂಧನ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರು ಸ್ಪಷ್ಟಪಡಿಸಿದರೂ ಕೇಂದ್ರ ಸರಕಾರ ಗೃಹ ಬಳಕೆಯ ಅನಿಲ ಸಿಲಿಂಡರ್ ಬೆಲೆಯನ್ನು ಏಕಾಏಕಿ 60 ರೂ. ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 115 ರೂ. ಹೆಚ್ಚಿಸಲಾಗಿದೆ.
ಕಳೆದ 11 ತಿಂಗಳಲ್ಲಿ ಗೃಹ ಬಳಕೆಯ ಸಿಲಿಂಡರ್ ಬೆಲೆ ಒಟ್ಟು 110 ರೂ. ಹೆಚ್ಚಿಸಿರುವುದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಭಾರೀ ಬರೆ ಹಾಕಿದಂತಾಗಿದೆ. ಈ ದರ ಏರಿಕೆಯಿಂದ ಹೋಟೆಲ್ ಮತ್ತು ರೆಸ್ಟೋರೆಂಟ್'ಗಳ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ ಎಂದು ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.