ಲೋಕಬಂಧು ನ್ಯೂಸ್ ಉಡುಪಿ, ಮಾ.23
ಹನ್ನೊಂದನೇ ಶತಮಾನದ ಆದ್ಯ ವಚನಕಾರ, ನೇಕಾರ ಸಮುದಾಯದ ಆರಾಧ್ಯ ದೈವ ದೇವರ ದಾಸಿಮಯ್ಯ ಸರಳ ಭಾಷೆಯಲ್ಲಿ ಸರ್ವರೂ ಅರಿಯುವಂತೆ ವಚನಗಳನ್ನು ರಚಿಸುವ ಮೂಲಕ ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿದ್ದ ಅನಿಷ್ಟ ಪದ್ಧತಿ ಹೋಗಲಾಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮ ವಹಿಸಿದ್ದರು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾ ಉಡುಪಿ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು12ನೇ ಶತಮಾನದಲ್ಲಿ ಆರಂಭವಾದ ವಚನ ಚಳವಳಿಗಿಂತ ಮೊದಲೇ ಸರಳ ವಚನಗಳನ್ನು ರಚಿಸಿದ ಆದ್ಯ ವಚನಕಾರ ಎಂಬ ಹೆಗ್ಗಳಿಕೆಗೆ ದಾಸಿಮಯ್ಯ ಪಾತ್ರರಾಗಿದ್ದಾರೆ. ವಚನ ಸಾಹಿತ್ಯದಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಂಡಿದೆ. ಅದಕ್ಕೆ ದೇವರ ದಾಸಿಮಯ್ಯ ಕಾರಣ. ಜಾತಿ, ಲಿಂಗ ತಾರತಮ್ಯ, ಸ್ತ್ರೀ ಶೋಷಣೆ ವಿರೋಧಿಸಿದ್ದ ದಾಸಿಮಯ್ಯ ಸಮಾಜ ಸುಧಾರಕ.
ಶರಣರ ವಚನಗಳನ್ನು ಸರ್ವರೂ ಓದಿಕೊಂಡರೆ ನೈತಿಕತೆ ಬೆಳೆಯಲಿದೆ. ಇಂಥ ಮಹನೀಯರ ಆದರ್ಶಗಳು ಯುವಪೀಳಿಗೆಗೆ ಪ್ರೇರಣೆಯಾಗಲಿದ್ದು, ಮಾನವರಲ್ಲಿರುವ ದ್ವೇಷ, ಅಸೂಯೆ ಭಾವನೆ ಹೋಗಲಾಡಿಸಲು ಅವರ ಸಂದೇಶಗಳು ದಾರಿದೀಪವಾಗಲಿವೆ ಎಂದರು.
ವಿಶೇಷ ಉಪನ್ಯಾಸ ನೀಡಿದ ಶೋಭಾ ಹರಿಪ್ರಸಾದ್ ಉಡುಪಿ ಮಾತನಾಡಿ, ಸುಮಾರು ಹನ್ನೊಂದನೆ ಶತಮಾನದ ಉತ್ತರಾರ್ಧದಲ್ಲಿ ಹಲವಾರು ವಚನಕಾರರು ಬಂದು ಹೋಗಿದ್ದರು. ಅವರಲ್ಲಿ ಪ್ರಮುಖರಾದ ದೇವರ ದಾಸಿಮಯ್ಯ ಹಲವಾರು ವಚನಗಳನ್ನು ರಚಿಸಿದ್ದರೂ ಅವರ ಸುಮಾರು 200ಕ್ಕೂ ಹೆಚ್ಚು ವಚನಗಳು ಕಾಣಸಿಗುತ್ತಿಲ್ಲ. 176 ವಚನಗಳು ಮಾತ್ರ ನಮಗೆ ದೊರಕಿದೆ. ಬಸವಾದಿ ವಚನಕಾರರಿಗೆ ಅವರ ವಚನಗಳು ಸ್ಪೂರ್ತಿದಾಯಕ ಎಂದೇ ಪರಿಗಣಿಸಲಾಗಿದೆ ಎಂದರು.
ಅಂಧಕಾರದಿಂದ ಜ್ಞಾನದ ಕಡೆಗೆ ಅಂದಿನ ಶತಮಾನದಲ್ಲಿಯೇ ಹೋರಾಡಿದ ಹಿರಿಮೆ ದೇವರ ದಾಸಿಮಯ್ಯರದ್ದಾಗಿದೆ. ಪ್ರತಿಯೊಬ್ಬರೂ ಯಾವುದೇ ಕೆಲಸವನ್ನು ಮಾಡುವ ಮೊದಲು ಅದರ ಬಗ್ಗೆ ಜ್ಞಾನ ಹೊಂದಿರಬೇಕು. ಅನಗತ್ಯ ವಿಚಾರಗಳಿಗೆ ಗಮನಹರಿಸದೇ ತಮ್ಮ ಗುರಿಯ ಕಡೆಗೆ ಗಮನವನ್ನು ಕೇಂದ್ರೀಕರಿಸಿಕೊಂಡಿಬೇಕು. ಕರಾವಳಿಯನೇಕಾರಿಕೆಗೆ ತನ್ನದೇ ಆದ ಹಿರಿಮೆ ಇದೆ. ನೇಕಾರ ವೃತ್ತಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ಸರಕಾರದ ವತಿಯಿಂದ ಸಿಗುವಂತಾಗಬೇಕು. ಕೈಮಗ್ಗದ ಕೆಲಸಗಾರರಿಗೆ ಹೆಚ್ಚಿನ ಮನ್ನಣೆ ದೊರೆಯುವಂತಾಗಬೇಕು ಎಂದು ಆಶಿಸಿದರು.
ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ದೇವರ ದಾಸಿಮಯ್ಯ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ವಚನಗಳನ್ನು ರಚಿಸಿ, ಸಮ ಸಮಾಜ ನಿರಗಜಳಳ ಸಂದೇಶ ನೀಡಿದ್ದಾರೆ ಎಂದರು.
ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾ ಉಡುಪಿ ಅಧ್ಯಕ್ಷ ರವಿ ಶೆಟ್ಟಿಗಾರ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಮುದಾಯದಲ್ಲಿ ಸಾಧನೆಗೈದ ಗಿರೀಶ್ ಶೆಟ್ಟಿಗಾರ್ ವಿಟ್ಲ ಅವರನ್ನು ಸನ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕಿ ಪೂಣರ್ಿಮಾ ಸ್ವಾಗತಿಸಿ, ಜಯರಾಮ ಶೆಟ್ಟಿಗಾರ್ ಮಣಿಪಾಲ ನಿರೂಪಿಸಿದರು. ಸಮುದಾಯದ ಕಾರ್ಯದರ್ಶಿ ಡಾ.ವೆಂಕಟರಾಯ ಶೆಟ್ಟಿಗಾರ್ ವಂದಿಸಿದರು.