ನಿರಾಶಾದಾಯಕ ಬಜೆಟ್

ಉಡುಪಿ | ಲೋಕಬಂಧು ನ್ಯೂಸ್
ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕದಲ್ಲಿ ಕರಾವಳಿ ಜಿಲ್ಲೆಗಳು ಇವೆ ಎನ್ನುವುದನ್ನು ಸರಕಾರ ಮರೆತಂತಿದೆ. ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ಚಕಾರ ಇಲ್ಲ. ಅಲ್ಪಸಂಖ್ಯಾತರ ತುಷ್ಟೀಕರಣ ಬಜೆಟ್‌ನಲ್ಲಿ ಎದ್ದುಕಾಣುತ್ತಿದ್ದು ಪಂಚಾಯತ್ ಚುನಾವಣೆಗೆ ಅಲ್ಪಸಂಖ್ಯಾತರ ಮತಕ್ಕಾಗಿ ಮೊಣಕೈಗೆ ತುಪ್ಪ ಹಚ್ಚುವ ಕೆಲಸ ಮಾಡಿದೆ ಎಂದು ಬಿಜೆಪಿ ನೇತಾರ ಕೆ.ಉದಯಕುಮಾರ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಂಚ ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲು ಏನೇನೋ ಪರದಾಟ ನಡೆಸಲಾಗಿದೆ. ಅಭಿವೃದ್ಧಿ ಕಾರ್ಯ ನಿಂತುಬಿಟ್ಟಿದೆ. ಯುವ ನಿಧಿ ಯೋಜನೆ ನೆನೆಗುದಿಗೆ ಬಿದ್ದಿದೆ. ಯುವ ನಿಧಿಗೆ ಹಣ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಹಿಂದುಳಿದ ವರ್ಗಗಳ ಮಕ್ಕಳಿಗೆ ಚೊಂಬು!


ಒಟ್ಟಿನಲ್ಲಿ ಈ ಬಾರಿಯ ಸಿದ್ದರಾಮಯ್ಯ ಬಜೆಟ್ ನಿರಾಶಾದಾಯಕ ಅಭಿವೃದ್ಧಿ ಕುಂಠಿತ ಬಜೆಟ್ ಎಂದು ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.