'ಕಾರ್ಯಕಲಾಪ' ಸಂಪಾದಕರಾಗಿ ಡಾ.ಕೃಷ್ಣಪ್ರಸಾದ್ ಪುನರಾಯ್ಕೆ

ಲೋಕಬಂಧು ನ್ಯೂಸ್ ಉಡುಪಿ, ಮಾ.20
ಪ್ರಸಿದ್ಧ ನೇತ್ರತಜ್ಞ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರು ಅಖಿಲ ಭಾರತ ನೇತ್ರ ತಜ್ಞರ ಸಂಘಟನೆಯ 'ಕಾರ್ಯಕಲಾಪ' ಸಂಪಾದಕರಾಗಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.ಡಾ.ಕೃಷ್ಣಪ್ರಸಾದ್ ಕೂಡ್ಲು ಹಲವಾರು ವರ್ಷಗಳಿಂದ ಈ ಸಂಘಟನೆಯ ರಾಷ್ಟ್ರ ಮಟ್ಟದ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳು ಲಭಿಸಿವೆ.