ಗ್ಯಾರಂಟಿ, ಅಭಿವೃದ್ಧಿ ಯೋಜನೆಗಳ ಸಮತೋಲನದ ಬಜೆಟ್

ಉಡುಪಿ | ಲೋಕಬಂಧು ನ್ಯೂಸ್
ಮನೆ ಹಂಚಿಕೆಯಲ್ಲಿ ಸಾಮಾನ್ಯ ವರ್ಗಕ್ಕೆ ಸಹಾಯ ಧನ ಏರಿಕೆ, ಕೃಷಿಕರಿಗೆ ಶೂನ್ಯ ಬಡ್ಡಿ ಸಾಲ ಯೋಜನೆ, ಅನ್ನಭಾಗ್ಯ ಗೃಹಲಕ್ಷ್ಮಿ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆಗಳಿಗೆ ಅನುದಾನ ಬಿಡುಗಡೆ ಇತ್ಯಾದಿಗಳ ಮೂಲಕ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಸಮತೋಲಿತ ಬಜೆಟ್‌ನ್ನು ಮುಖ್ಯಮಂತ್ರಿ ಮಂಡಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ವತ್ರೆ, ಬೆಂಗಳೂರು ಅಭಿವೃದ್ಧಿಗಾಗಿ ಬಂಪರ್ ಕೊಡುಗೆ ನೀಡಲಾಗಿದೆ. ಆರೋಗ್ಯ, ಶಿಕ್ಷಣ ಕ್ಷೇತ್ರಗಳಿಗೆ ಒತ್ತುನೀಡಿ ಅನುದಾನ, ಕರಾವಳಿ  ಪ್ರವಾಸೋದ್ಯಮ ಅಭಿವೃದ್ಧಿ, ಸಮುದ್ರ ಕೃಷಿಗೆ ಉತ್ತೇಜನ ಹೀಗೆ ಬಜೆಟ್‌ನಲ್ಲಿ ಎಲ್ಲಾ ಸಮುದಾಯಗಳನ್ನು ಪರಿಗಣಿಸಿ ಅನುದಾನ ನೀಡಲಾಗಿದೆ. ಸಿಲ್ಕ್ ಪಾರ್ಕ್, ಟ್ರಾಮಾ ಸೆಂಟರ್ ನಿರ್ಮಾಣ ಹೀಗೆ ಎಲ್ಲ ರೀತಿಯಲ್ಲೂ ಸಮತೋಲನದ ಬಜೆಟ್ ಆಗಿದೆ ಎಂದು ಭಾಸ್ಕರ ರಾವ್ ಕಿದಿಯೂರು ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.