ಕಂಬಳದ ಉಳಿವಿಗೆ ನೆರವು

ಲೋಕಬಂಧು ನ್ಯೂಸ್, ಬಂಟ್ವಾಳ
ಅವಿಭಜಿತ ದ.ಕ. ಜಿಲ್ಲೆಯಲ್ಲಿ ನಡೆಯುವ ಕಂಬಳ ಜಾತ್ಯತೀತ, ಧರ್ಮಾತೀತವಾಗಿ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದ್ದು,
ಅದನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನೂ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಇಲ್ಲಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ (ಮಾರ್ಚ್ 7) ಆರಂಭಗೊಂಡ 15ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳ ಕೂಟದಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದರು.ರಾಜಕೀಯ ಪ್ರಜಾಪ್ರಭುತ್ವದ ಜೊತೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ದೊರಕಿದಾಗ ಮಾತ್ರ ಸ್ವಾತಂತ್ರ್ಯದ ಪರಿಕಲ್ಪನೆ ಯಶಸ್ಸು ಕಾಣುತ್ರದೆ. ಈ ಹಿನ್ನೆಲೆಯಲ್ಲಿ ಸಮಾಜದ ದುರ್ಬಲ ವರ್ಗವನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಲಾಗುತ್ತಿದೆ. ಮುಂದೆಯೂ ಮಾಡಲಾಗುವುದು. ಜನತೆ 'ಕೈ' ಹಿಡಿಯುವ ಭರವಸೆ ಇದೆ. 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ‌ ಎಂದರು.


ಸಿಎಂಗೆ ಕಂಬಳದ ಬೆತ್ತ
ಇದೇ ವೇಳೆ ಕಂಬಳ ಸಮಿತಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳದ ಬೆತ್ತ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.


ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ ಆಶೀರ್ವಚನ ನೀಡಿದರು.


ಸ್ಪೀಕರ್ ಯು.ಟಿ. ಖಾದರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಎಂ.ಎಲ್.ಸಿ.ಗಳಾದ ಸಲೀಮ್ ಆಹ್ಮದ್ ಮತ್ತು ಐವನ್ ಡಿ'ಸೋಜ, ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ಟಿ.ಡಿ. ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಸಾಮಾಜಿಕ ಕಾರ್ಯಕರ್ತ ಎಂ.ಜಿ.ಹೆಗಡೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್, ಟಿ.ಎಮ್. ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಸಿಎಂ  ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಧನಭಾಗ್ಯ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್. ಪೂಜಾರಿ ಮತ್ತು ಕೃಪಾ ಆಳ್ವ , ಬಂಟ್ವಾಳ ವಲಯದ ಧರ್ಮಗುರುಗಳಾದ ವಿಕ್ಟರ್ ಡಿ'ಸೋಜ, ವಿಲ್ಪ್ರೆಡ್ ರೋಡ್ರಿಗಸ್ ಮೈಸೂರು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಚೆನ್ನವೇಣಿ ಶೆಟ್ಟಿ, ವಕೀಲ ಅಶ್ವನಿ ಕುಮಾರ್ ರೈ, ದೀಪಕ್ ಕುಮಾರ್ ರೈ, ಉದ್ಯಮಿ ಉದಯ ಹೆಗ್ಡೆ ಉಪಸ್ಥಿತರಿದ್ದರು.


ಸಮಿತಿ ಪದಾಧಿಕಾರಿಗಳಾದ ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ಬಿ.ಪದ್ಮಶೇಖ‌ರ್ ಜೈನ್‌, ಪದ್ಮನಾಭ ರೈ ಕಲ್ಲಡ್ಕ, ಬೇಬಿ ಕುಂದರ್,  ಬಿ. ಎಂ. ಅಬ್ಬಾಸ್ ಅಲಿ, ಬಾಲಕೃಷ್ಣ ಅಂಚನ್‌, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಶೇಖರ ಭಂಡಾರಿ, ಸುದರ್ಶನ ಜೈನ್, ರಾಜೀವ ಶೆಟ್ಟಿ ಎಡ್ತೂರು, ಪಿಲಿಪ್ ಫ್ರೆಂಕ್, ಇಬ್ರಾಹಿಂ ನವಾಜ್ ಬಡಕಬೈಲು, ಮಾಜಿ‌ ಮೇಯರ್ ಶಶಿಧರ್ ಹೆಗ್ಡೆ ಮೊದಲಾದವರು ವೇದಿಕೆಯಲ್ಲಿದ್ದರು.


ಸಮಿತಿ ಗೌರವಾಧ್ಯಕ್ಷ ಹಾಯ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಸ್ತಾವಿಕವಾಗಿ ಮಾತನಾಡಿ, 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬಂಟ್ವಾಳ ಕ್ಷೇತ್ರ ಸಹಿತ ಜಿಲ್ಲೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ. ಪಶ್ಚಿಮ ವಾಹಿನಿ ಯೋಜನೆಯಡಿ ಕರಾವಳಿಯ ಮೂರು ಜಿಲ್ಲೆಗಳಿಗೆ 300 ಕೋ.ರೂ.ಅನುದಾನ ಒದಗಿಸಲಾಗಿದೆ. ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣವಾಗುವ ನಿಟ್ಟಿನಲ್ಲಿ ಮತ್ತೆ ಜೀವ ನೀಡಬೇಕು ಎಂದು ಮನವಿ ಮಾಡಿದರು.


ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಸ್ವಾಗತಿಸಿದರು.
ಬಾಲಕೃಷ್ಣ ಆಳ್ವ ಕೋಡಾಜೆ ಮತ್ತು ರಾಜೀವ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.


ಸಿಎಂ ಅಗಮನ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಮಾಡಲಾಗಿತ್ತು.