'ಸಮಾಧಾನ ಮಹೋತ್ಸವ' ತಡೆಯಲು ಬಂದ ಹಿಂಜಾವೇ ಕಾರ್ಯಕರ್ತರ ಬಂಧನ

ಲೋಕಬಂಧು ನ್ಯೂಸ್ | ಉಡುಪಿ, ಮಾ.20
ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20 ಶುಕ್ರವಾರದಿಂದ ಮೂರು ದಿನಗಳ ಕಾಲ ನಗರದ ಮಿಷನ್ ಕಂಪೌಂಡಿನಲ್ಲಿ ಆಯೋಜಿಸಿರುವ 'ಸಮಾಧಾನ ಮಹೋತ್ಸವ' ಕಾರ್ಯಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆ (ಹಿಂಜಾವೇ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಗೋವಿಂದ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಬಳಿಕ ಮಿಷನ್ ಕಂಪೌಂಡ್ ಬಳಿಯ ಮೈದಾನದ ಕಡೆಗೆ ತೆರಳಲು ಅನುವಾಗುತ್ತಿದ್ದಂತೆಯೇ ತಡೆದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.


ಬಳಿಕ ಮಣಿಪಾಲ ಠಾಣೆಗೆ ಕರೆದೊಯ್ದು ಬಿಡುಗಡೆ ಮಾಡಿದರು.


ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ನಗರ ಠಾಣೆಯ ಪ್ರಭಾರ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿತ್ತು.